# ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ – Samruddiya Nele
ವಿಶೇಷ ವರದಿ

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ

Amazon.in/ONLINE SHOPPING

ಬೀದರ, ಆಗಸ್ಟ್.01 (ಕರ್ನಾಟಕ ವಾರ್ತೆ):- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು.
ಅವರು ಶುಕ್ರವಾರ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ವಿಜಯ ಮಹಾಂತ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯನ್ನು ರಾಜ್ಯ ಸರ್ಕಾರ ವ್ಯಸನ ಮುಕ್ತ ದಿನಾಚರಣೆ ಎಂದು ಆಚಾರಿಸಲಾಗುತ್ತಿದೆ. ಮಹಾಂತ ಶಿವಯೋಗಿಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 1, 1930ರಲ್ಲಿ ಜನಿಸಿದರು. 1970ರಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ದೃಡ ಸಂಕಲ್ಪ ತೊಟ್ಟು 1974ರಲ್ಲಿ ‘ಮಾಹಾಂತ ಜೋಳಿಗೆ, ದುಷ್ಚಟಗಳ ಭಿಕ್ಷೆ’ ಎಂಬ ವಾಕ್ಯದೊಂದಿಗೆ ಆಂದೋಲನ ಆರಂಭಿಸಿದರು. ಅವರ ಆಂದೋಲನ ಪರಿಣಾಮವಾಗಿ ಅನೇಕರು ವ್ಯಸನಗಳಿಂದ ಆಚೆ ಬಂದು ಉತ್ತಮ ಜೀವನ ಕಟ್ಟಿಕೊಂಡರು ಎಂದರು.

ಇಂದಿನ ಮಕ್ಕಳು ಚಿಕ್ಕ ವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಪಡುತ್ತಿದ್ದಾರೆ ಆದ್ದರಿಂದ ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ಅವರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ. ಯುವಕರು ಧೂಮಪಾನ, ಮದ್ಯಪಾನಗಳನ್ನು ಬಿಟ್ಟು ಆರೋಗ್ಯವಂತ ಜೀವನ ಕಟ್ಟಿಕೊಳ್ಳಬೇಕು ಮತ್ತು ಮೋಬೈಲ್‍ನಿಂದ, ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದು ಶಿಕ್ಷಣ, ಕ್ರೀಡೆ, ಯೋಗಾಸನ ಅಂತಹ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ದೇಶದ ಹಾಗೂ ಸಮಾಜದ ಒಳಿತಿಗಾಗಿ ನಮ್ಮದೆ ಆದ ಕೊಡುಗೆ ನೀಡಬೇಕು. ಜಿಲ್ಲೆಯಲ್ಲಿ ಗಿಡ-ಮರಗಳನ್ನು ಬೆಳಿಸಿ, ಹಸಿರು ಹೊದುಕೆ ಹೆಚ್ಚಿ, ಪರಿಸರ ಸಂರಕ್ಷಣೆ ಮಾಡಬೇಕು ಮತ್ತು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಲು ಎಲ್ಲರೂ ಕೈಜೋಡಿಸಬೇಕು ಎಂದರು.

ಮನೋ ವೈದ್ಯ ತಜ್ಞರಾದ ಡಾ. ರಾಘವೇಂದ್ರ ವಾಗೋಲ್ ಅವರು ವಿಶೇಷ ಉಪನ್ಯಾಸ ನೀಡಿ ಮಾದಕ ವಸ್ತುಗಳ ಬಳಕೆಯಿಂದ ನಮ್ಮ ಮೆದುಳು ಹಾಗೂ ನರಮಂಡಲದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು. ಮಾದಕ ವಸ್ತುಗಳು ಅಥವಾ ಮಾದಕ ದ್ರವ್ಯಗಳಾದ ತಂಬಾಕು ಉತ್ಪನ್ನಗಳು, ಆಲ್ಕೊಹಾಲ್‍ಗಳು ಗಾಂಜಾ, ಹೆರಾಯಿನ್, ಕೊಕೇನ್, ಎಂಡಿಎಂಎ ಮುಂತಾದವು ಆಗಿವೆ ಎಂದರು. ಕಾಲೇಜು ದಿನಗಳಲ್ಲಿ ಕುತೂಹಲಕ್ಕೆ ಸ್ನೇಹಿತರ ಪ್ರಚೋದನೆಯಿಂದ ಮಾದಕ ವಸ್ತುಗಳ ಬಳಕೆ ಪ್ರಾರಂಭವಾಗುತ್ತದೆ. ನಂತರ ಇದು ನಿಯಮಿತ ಬಳಕೆ ಪ್ರಾರಂಭವಾಗುತ್ತದೆ. ನಂತರ ಇದರ ದುರುಪಯೋಗ ಪ್ರಾರಂಭವಾಗಿ ನಮ್ಮ ದೇಹದ ಮೇಲೆ ದುಷ್ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ನಂತರ ಇದಕ್ಕೆ ದಾಸರಾಗಿ ವ್ಯಸನಕ್ಕೆ ಒಳಗಾಗುತ್ತಾರೆ. ಈ ಹಂತದಲ್ಲಿ ಇದರಿಂದ ಹೊರಕ್ಕೆ ಬರುವುದು ಹೆಚ್ಚು ಕಷ್ಟವಾಗುತ್ತದೆ ಮತ್ತು ಬಳಕೆಯಿಂದಾಗಿ ಕ್ಯಾನ್ಸರ್ ಮತ್ತು ಇತರೆ ರೋಗಗಳು ಬರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ, ಅದರಿಂದ ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದರು.
ವ್ಯವಸನ ಮುಕ್ತ ದಿನಾಚರಣೆ ಅಂಗವಾಗಿ ವಿವಿಧ ಶಾಲಾ-ಕಾಲೇಜುಗಳ ಮಕ್ಕಳಿಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಗಳಲ್ಲಿಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಸುಳ್ಳೊಳ್ಳಿ , ವಿಜಯ ಮಹಾಂತ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ರಾಚಪ್ಪ ಮಾಶೆಟ್ಟಿ, ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಮಹೇಶ ಮಾಶೆಟ್ಟಿ, ಪ್ರಶಾಂತ ಮಾಶೆಟ್ಟಿ , ಪದವಿ ಕಾಲೇಜಿನ ಪ್ರಾಂಶುಪಾಲರಾದ ಸ್ವಪ್ನಾ ಮಾಶಟ್ಟಿ, ನಿವೃತ್ತ ಪ್ರಾಂಶುಪಾಲರು ಹಾಗೂ ಕಸಾಪ ಕೋಶಾಧ್ಯಕ್ಷರಾದ ಶಿವಶಂಕರ, ಮೊರಾರ್ಜಿ ಕಾಲೇಜಿನ ಪ್ರಾಂಶುಪಾಲರಾದ ಚನ್ನಬಸವ ಹೆಡೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಕೃಷ್ಣ ಸೊಲಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Chief Editor Keerthi Sena

Samruddiya Nele is a digital magazine, to connect with people with latest updates on every moment news, not only to serve the needy but also to serve the nation.

शेअर करा.

Chief Editor Keerthi Sena

Samruddiya Nele is a digital magazine, to connect with people with latest updates on every moment news, not only to serve the needy but also to serve the nation.

Related Articles

Leave a Reply

Your email address will not be published. Required fields are marked *

Back to top button
Don`t copy text!