*ಶಾಂತಿ ಹಾಗೂ ಸೌಹಾರ್ದಯುತವಾಗಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬವನ್ನು ಆಚರಿಸೋಣ- ಎಸ್ಪಿ ಪ್ರದೀಪ ಗುಂಟಿ*
ಬೀದರ ಅಗಸ್ಟ್ 19 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ನಡೆದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಸೌಹಾರ್ದತೆ ಸಭೆ ಉದ್ದೇಶಿಸಿ ಮಾತನಾಡಿದರು.
ದೇಶದಲ್ಲಿಯೇ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಗಣೇಶ ಹಬ್ಬವನ್ನು ಆಚರಿಸುತ್ತಾರೆ. ನಮ್ಮ ಬೀದರ ಜಿಲ್ಲೆಯಲ್ಲಿ ಕೂಡ ಬಹಳ ಸಂಭ್ರಮ, ಸಡಗರ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಣೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಹಬ್ಬದ ಪ್ರಯುಕ್ತ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳುವುದು ತಮ್ಮ ಮೊದಲ ಆದ್ಯತೆಯಾಗಿದೆ. ಗಣೇಶ ಹಬ್ಬವನ್ನು ಅದ್ದೂರಿಯಾಗಿ, ಶಾಂತಿಯುತವಾಗಿ ಹಾಗೂ ಸೌಹಾರ್ದತೆಯಿಂದ ಆಚಾರಿಸೋಣ. ತಮ್ಮ ಇಲಾಖೆ ಯಾವಾಗಲೂ ಸಾರ್ವಜನಿಕರ ಸಹಾಯಕ್ಕೆ ಇರುತ್ತದೆ ಮತ್ತು ಸಾರ್ವಜನಿಕರು ಕೂಡ ತಮ್ಮ ನಿರ್ದೇಶನಗಳನ್ನು ಪಾಲನೆ ಮಾಡಬೇಕು ಎಂದರು.
ಹೆಚ್ಚು ಶಬ್ದ ಹೊಂದಿರುವ ಡಿಜೆ ಅಥವಾ ಧ್ವನಿ ವರ್ಧಕಗಳು ಬಳಸಕೂಡದು ಮತ್ತು ಸಮಯ ಪಾಲನೆ ಕಟ್ಟು ನಿಟ್ಟಾಗಿ ಪಾಲಿಸಬೇಕು ಹಾಗೂ ಪೋಲಿಸ್ ಇಲಾಖೆಯ 31 ಮಾರ್ಗ ಸೂಚಿಗಳನ್ನು ಪಾಲಿಸಬೇಕು. ಹಬ್ಬದ ನಿಮಿತ್ತವಾಗಿ ಧ್ವನಿ ವರ್ಧಕವನ್ನು ಬೆಳಿಗ್ಗೆ 6 ಗಂಟೆಯಿAದ ರಾತ್ರಿ 10 ಗಂಟೆವರೆಗೆ ಹಚ್ಚಬೇಕು ಮತ್ತು ವಿಸರ್ಜನೆ ದಿವಸ ಸಮಯ ಪಾಲನೆ ಬಹಳ ಮುಖ್ಯವಾಗಿದೆ ಎಂದರು. ಹಿಂದಿನ ವರ್ಷ ಆಗಿರುವ ತಪ್ಪುಗಳು ಈ ವರ್ಷ ಆಗದಂತೆ ನೋಡಿಕೊಳ್ಳಬೇಕು. ವಿಸರ್ಜನೆಯ ಮೆರವಣಿಗೆ ವೇಳೆ ಆಂಬುಲೆನ್ಸ್ , ಅಗ್ನಿಶಾಮಕ ಮತ್ತು ಇತರೆ ತುರ್ತು ವಾಹನಗಳಿಗೆ ದಾರಿ ಮಾಡಿಕೊಡಬೇಕು ಎಂದರು. ಪ್ರತಿಯೊಬ್ಬರ ಜೀವ ನಮಗೆ ಮಹತ್ವದಾಗಿದೆ. ಎಲ್ಲರನ್ನೂ ರಕ್ಷಣೆ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಸಾರ್ವಜನಿಕರಿಗೆ ತೊಂದರೆಯಾಗದAತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಮತ್ತು ಅಧಿಕಾರಿಗಳು ನೀಡುವಂತಹ ಮಾರ್ಗ ಸೂಚಿಗಳನ್ನು ಪಾಲನೆ ಮಾಡುವುದು ಸಾರ್ವಜನಿಕರ ಕರ್ತವ್ಯವಾಗಿದೆ ಎಂದರು.
ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ಜಿಲ್ಲೆಯಲ್ಲಿ ಹವಾಮಾನದ ವೈಪರೀತ್ಯ ಕಾಣುತ್ತಿದ್ದೇವೆ, ನಗರದಲ್ಲಿ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳಲಾಗುವುದು ಮತ್ತು ಎಲ್ಲರೂ ಒಂದಾಗಿ ಹಬ್ಬಗಳನ್ನು ಆಚಾರಿಸೋಣ ಎಂದರು.
ಗಣೇಶ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಗಾದಗಿ ಮಾತನಾಡಿ, ಬೀದರ ಜಿಲ್ಲೆ ಸೌಹಾರ್ದತೆಗೆ ಹೆಸರಾದ ಜಿಲ್ಲೆಯಾಗಿದೆ. ಈ ಸಲಾ ಕೂಡ ಗಣೇಶ ಹಬ್ಬವನ್ನು ಅದ್ದೂರಿಯಾಗಿ, ಶಾಂತಿಯುತವಾಗಿ, ಸೌಹಾರ್ದತೆಯಿಂದ ಮತ್ತು ಸಮಯ ಪಾಲನೆ ಹಾಗೂ ಪೋಲಿಸ್ ಇಲಾಖೆಯ ಮಾರ್ಗ ಸೂಚಿಗಳಂತೆ ಆಚರಿಸಲಾಗುವುದು ಎಂದರು.
ಗಣೇಶ ಮಂಡಳಿಯ ಕಾರ್ಯಾಧ್ಯಕ್ಷ ಬಾಬು ವಾಲಿ ಮಾತನಾಡಿ, ಜೆಸ್ಕಾಂ ಅವರು ವಿದ್ಯುತ್ ತೊಂದರೆ ಆಗದಂತೆ ಮತ್ತು ನಗರಸಭೆಯಿಂದ ಸ್ವಚ್ಛತೆ ಮತ್ತು ನೈರ್ಮಲ್ಯ ಸಮಸ್ಯೆ ಆಗದಂತೆ ಹಾಗೂ ರಸ್ತೆಗಳಲ್ಲಿ ನೀರು ನಿಲ್ಲದಂತೆ, ಸಾಂಕ್ರಾಮಿಕ ರೋಗಗಳು ಹರಡದಂತೆ ನೋಡಿಕೊಳ್ಳಬೇಕು ಎಂದರು.
ಶಾಹೀನ್ ಪಟೇಲ್ ಮಾತನಾಡಿ, ಜಿಲ್ಲೆಯಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬವನ್ನು ಭಾವೈಕ್ಯತೆಯಿಂದ ಆಚಾರಿಸೋಣ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾAತ ಪುಜಾರಿ, ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಡಿವೈಎಸ್ಪಿ ಶಿವನಗೌಡ ಪಾಟೀಲ, ಶಶಿ ಹೊಸಳ್ಳಿ, ನಂದಕುಮಾರ ವರ್ಮಾ, ಮುನ್ನಾ ಕೌನ್ಸ್ಲರ್, ನಿಜಾಮುದ್ದೀನ್ ಸೇರಿದಂತೆ ಎಲ್ಲಾ ಧರ್ಮಗಳ ಮುಖಂಡರು ಉಪಸ್ಥಿತರಿದ್ದರು.