ಸುಸಜ್ಜಿತ ಕಟ್ಟಡ-ಸಚಿವ ಈಶ್ವರ ಬಿ. ಖಂಡ್ರೆ.
ಬೀದರ, ಅಗಸ್ಟ್ 16 (ಕರ್ನಾಟಕ ವಾರ್ತೆ):- ಕಳೆದ 15 ವರ್ಷಗಳಿಂದ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾಗಿದ್ದ ಸುಸಜ್ಜಿತ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹಾಗೂ ಪೌರಾಡಳಿತ ಸಚಿವರಾದ ರಹೀಮ್ ಖಾನ್ ಇಂದು ಹಳೆಯ ಜಿಲ್ಲಾಧಿಕಾರಿಗಳ ಆವರಣದಲ್ಲಿ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು.






