# ಮೂರನೇ ಬಾರಿ ಸಚಿವರಾದ ಈಶ್ವರ ಖಂಡ್ರೆಗೆ ನೀಲಿ ಶಾಲು ಹೊದಿಸಿ ಅಭಿನಂದನೆ – Samruddiya Nele
ವಿಶೇಷ ವರದಿ

ಮೂರನೇ ಬಾರಿ ಸಚಿವರಾದ ಈಶ್ವರ ಖಂಡ್ರೆಗೆ ನೀಲಿ ಶಾಲು ಹೊದಿಸಿ ಅಭಿನಂದನೆ

 ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಸೆರ್ಪಡೆಯಾಗಿರುವ ಭಾಲ್ಕಿ ಕ್ಷೇತ್ರದ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಈಶ್ವರ ಬಿ. ಖಂಡ್ರೆ ಅವರು ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಮಾರುತಿ ಬೌಧ್ದೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕರಾದ ಮಹೇಶ ಗೋರನಾಳಕರ್, ಕರ್ನಾಟಕ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸದಸ್ಯ ವಿನಯಕುಮಾರ ಮಾಳಗೆ, ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ ಹಾಗೂ ಯುವ ಮುಖಂಡ ಅಭಿ ಕಾಳೆ ಅವರು ಈಶ್ವರ ಖಂಡ್ರೆ ಅವರಿಗೆ ನೀಲಿ ಶಾಲು ಹೊದಿಸಿ ಶುಭಾಶಯ ಕೋರಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಾಗೂ ಸಮಾಜದ ಎಲ್ಲಾ ವರ್ಗಗಳ ಹಿತಾಸಕ್ತಿಗೆ ಈಶ್ವರ ಖಂಡ್ರೆ ಅವರ ಸಚಿವ ಸ್ಥಾನ ಮತ್ತಷ್ಟು ಬಲ ನೀಡಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು. ಸಚಿವರಾಗಿ ಮತ್ತೊಮ್ಮೆ ಅವಕಾಶ ದೊರೆತಿರುವುದು ಬೀದರ ಜಿಲ್ಲೆ ಹಾಗೂ ಭಾಲ್ಕಿ ಕ್ಷೇತ್ರದ ಜನತೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು.

ಈ ವೇಳೆ ಖಂಡ್ರೆ ಅವರ ಮುಂದಿನ ಆಡಳಿತ ಅವಧಿ ಯಶಸ್ವಿಯಾಗಲಿ ಎಂದು ಹಾರೈಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಅವರು ಹೆಚ್ಚಿನ ಕೊಡುಗೆ ನೀಡಲಿದ್ದಾರೆ ಎಂಬ ನಿರೀಕ್ಷೆಯನ್ನು ಮುಖಂಡರು ವ್ಯಕ್ತಪಡಿಸಿದರು.

Chief Editor Keerthi Sena

Samruddiya Nele is a digital magazine, to connect with people with latest updates on every moment news, not only to serve the needy but also to serve the nation.

शेअर करा.

Chief Editor Keerthi Sena

Samruddiya Nele is a digital magazine, to connect with people with latest updates on every moment news, not only to serve the needy but also to serve the nation.

Related Articles

Leave a Reply

Your email address will not be published. Required fields are marked *

Back to top button
Don`t copy text!